2024 ರ ಲೋಕಸಭೆ ಚುನಾವಣೆಗೆ ಮುನ್ನ BJP ಯನ್ನ ಎದುರಿಸಲು ತೃತಿಯ ರಂಗ ಮತ್ತೆ ಒಂದಾಗುತ್ತಿದೆ. ವಿಶೇಷವೆಂದರೆ ಈ ಭಾರಿ ಕಾಂಗ್ರೆಸ್ ಅನ್ನ ಸಹ ಇದರ ಭಾಗವಾಗಿಸಲು ಹಲವು ಪಕ್ಷಗಳ ಮುಖಂಡರು ತಯಾರಿ ನಡೆಸುತ್ತಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ದೇಶದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಬಲಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ಕಲ್ಬುರ್ಗಿಯಲ್ಲಿ ಹೇಳಿದ್ದರೆ.
ಇದರ ಬೆನ್ನಲ್ಲೆ 2024 ರ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಶೀಘ್ರದಲ್ಲೇ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವುದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಗುರುವಾರ ಹೇಳಿದ್ದಾರೆ.
ಶತಯಾಗತಾಯ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಲು ಪ್ರಾದೇಶಿಕ ಪಕ್ಷಗಳೆಲ್ಲವೂ ಒಂದು ಸೂತ್ರದಡಿ ಒಗ್ಗಟ್ಟಾಗುತ್ತಿವೆ.
ಚುನಾವಣೆಗೆ ಪ್ರಾದೇಶಿಕ ಪಕ್ಷಗಳ ಕಾರ್ಯತಂತ್ರದ ವಿವರಗಳನ್ನು ಹಂಚಿಕೊಂಡಿರುವ ಕುಮಾರಸ್ವಾಮಿ , ಇತ್ತೀಚೆಗೆ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿ ಮಾಡಿ ರಾಷ್ಟ್ರಮಟ್ಟದಲ್ಲಿ ಸಿದ್ಧತೆ ಕುರಿತು ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಜಿ ಸಿಎಂ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಬೇಕು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೇಳಿಕೆಯನ್ನು ಸಹ ಬೆಂಬಲಿಸುತ್ತೇನೆ ಎಂದು ಹೇಳಿದರು. ಪ್ರಾದೇಶಿಕ ಪಕ್ಷಗಳ ಬಲವರ್ಧನೆಯಲ್ಲಿ ತಾವೇ ಮುಂದಾಳತ್ವ ವಹಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ತಮ್ಮದು ಚಿಕ್ಕ ಪಕ್ಷ, ಆದರೆ ಪ್ರಾದೇಶಿಕ ಪಕ್ಷಗಳ ಹೋರಾಟಕ್ಕೆ ಖಂಡಿತಾ ಎಲ್ಲ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಎದುರಿಸುವುದು ಒಂದೇ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲಿಕ್ಕಿರುವ ಅಸ್ತ್ರ ಎಂದು ಕಂಡು ಕೊಂಡಿವೆ..