2024ರ ಲೋಕಸಭೆ ಚುನಾವಣೆ ಪ್ಲಾನ್, ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ತಾಕೀತು
2024 Lok Sabha election plan, Rahul Gandhi warns state leaders…
2024ರಲ್ಲಿ ಶತಾಯಗತಾಯ ಕೇಂದ್ರದಲ್ಲಿ ಅಧಿಕಾರದ ಗದ್ದುಗೆಯನ್ನು ಹಿಡಿಯಲು ವಿಪಕ್ಷಗಳು ಹವಣಿಸುತ್ತಿವೆ. ಮುಂಬರುವ ಲೋಕಸಭಾ ಚುನಾಚಣೆಗೆ ಈಗಿನಿಂದಲೇ ಕಾರ್ಯತಂತ್ರ ಹೆಣೆಯಲು ಶುರು ಮಾಡಿಕೊಂಡಿವೆ. ಗ್ಯಾರಂಟಿ ಯೋಜನೆಗಳ ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲೂ ಪಾರಮ್ಯ ಮೆರೆಯಲು ಪ್ಲ್ಯಾನ್ ಮಾಡುತ್ತಿದೆ. ಲೋಕಸಭೆ ಚುನಾವಣೆಗೆ ಯಾವ ರೀತಿ ರಣತಂತ್ರಗಳನ್ನು ರೂಪಿಸಬೇಕು? ಪಕ್ಷ ಸಂಘಟನೆ ಹೇಗಿರಬೇಕು? ಇತ್ಯಾದಿ ವಿಚಾರಗಳ ಕುರಿತು ಬುಧವಾರ ಹೈಕಮಾಂಡ್ ರಾಜ್ಯ ನಾಯಕರ ಸಭೆ ಕರೆದಿತ್ತು.
ಹೈಕಮಾಂಡ್ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದಿಯಾಗಿ 50 ಜನ ಶಾಸಕರು, ಸಂಸದರು ಮತ್ತು ಸಚಿವರು ದೇಹಲಿಗೆ ಹೋಗಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲಿ ಹಲವು ಮಹತ್ತದ ವಿಚಾರಗಳು ಚರ್ಚೆಯಾಗಿವೆ.
ಸಭೆಯಲ್ಲಿ ಗ್ಯಾರಂಟಿಗಳ ಸಮರ್ಪಕವಾದ ಜಾರಿ ಲೋಕಸಭಾ ಚುನಾವಣೆಯಲ್ಲೂ ಪರಿಣಾಮ ಬೀರುತ್ತಾ? ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ 20 ಕ್ಷೇತ್ರಗಳನ್ನು ಗೆಲ್ಲುವ ಗುರಿ, ಪಕ್ಷ ಸಂಘಟನೆ ಹಾಗೂ ಶಾಸಕರ ಅಸಮಾಧಾನ ಬೇಗುದಿಗೂ ಮದ್ದು ಅರೆಯಲಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ 19 ಹಿರಿಯ ಸಚಿವರು, ಎಐಸಿಸಿ ಪದಾಧಿಕಾರಿಗಳು ಸೇರಿದಂತೆ 37 ಉನ್ನತ ನಾಯಕರೊಂದಿಗೆ ಮೂರು ಹಂತದಲ್ಲಿ ಆರು ತಾಸುಗಳ ಕಾಲ ನಡೆದ ಸಭೆಯಲ್ಲಿ ವರಿಷ್ಠರು ರಾಜ್ಯ ಹಲವು ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ 20 ಕ್ಷೇತ್ರಗಳನ್ನು ಗೆಲ್ಲುವ ಉದ್ದೇಶ ಹೊಂದಿರುವ ಕಾಂಗ್ರೆಸ್, ವಿಧಾನಸಭೆ ಚುನಾವಣೆಗೆ ಮುನ್ನವೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಕೂಡ ಸಭೆಗೆ ಹೈಕಮಾಂಡ್ ಆಹ್ವಾನಿಸಿತ್ತು.
ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಶೇ 40 ಲಂಚದ ಆರೋಪದ ಬಗ್ಗೆ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿ ಯಶಸ್ಸು ಗಳಿಸಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ವಿಷಯದಲ್ಲಿ ನಾವು ಶೂನ್ಯ ಸಹಿಷ್ಣು ಆಗಿರುತ್ತೇವೆ. ನಾವು ಸ್ವಚ್ಛ ಆಡಳಿತ ನೀಡಬೇಕು. ಕೆಲವು ಸಚಿವರು ತಮ್ಮ ಧೋರಣೆಯನ್ನು ಬದಲಿಸಿಕೊಳ್ಳಬೇಕು. ಸ್ವಜನ ಪಕ್ಷಪಾತಕ್ಕೆ ಅವಕಾಶ ನೀಡಬಾರದು ಎಂದು ಸಭೆಯಲ್ಲಿ ತಾಕೀತು ಮಾಡಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡು ತಿಂಗಳಷ್ಟೇ ಕಳೆದಿದೆ. ಅಷ್ಟರಲ್ಲೇ ಕೆಲವು ಸಚಿವರ ಕಾರ್ಯವೈಖರಿ ಬಗ್ಗೆ ಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಸಚಿವರು ಶಾಸಕರ ಕೈಗೂ ಸಿಗುತ್ತಿಲ್ಲ’ ಎಂದು ಕೆಲವು ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಇವೆಲ್ಲ ಆಧಾರರಹಿತ ಆರೋಪಗಳು. ಶಾಸಕಾಂಗ ಪಕ್ಷದ ಸಭೆ ಕರೆದು ಶಾಸಕರ ಅಹವಾಲು ಆಲಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು. ‘ನಮ್ಮ ಸರ್ಕಾರದ ಬಗ್ಗೆ ಸಣ್ಣ ಕಳಂಕವೂ ಇರಬಾರದು. ಯಾರೂ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು’ ಎಂದು ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.








