ಕಾಂಗೋದ (Congo Rains) ಕಸಾಯಿ ಎಂಬ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಳೆಗೆ ಕನಿಷ್ಠ 22 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗೋದ ಕಸಾಯಿ-ಮಧ್ಯ ಪ್ರಾಂತ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಆ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೇ, ಕೆಲವು ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗಿದೆ. ಹಲವೆಡೆ ಮನೆಗಳು, ಚರ್ಚ್‌ಗಳು ಮತ್ತು ರಸ್ತೆಗಳು ಕುಸಿದಿವೆ. ಹಲವರು ನಿರಾಶ್ರಿತರಾಗಿದ್ದಾರೆ.
ಕನಂಗಾದ ಕಮ್ಯೂನ್‌ಗೆ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ ಎಂದು ಗವರ್ನರ್ ಜಾನ್ ಕಬೆಯಾ ಹೇಳಿದ್ದಾರೆ.