22 ವರ್ಷದ ಯುವತಿ ಮೇಲೆ 1 ತಿಂಗಳ ಕಾಲ 60 ಜನರಿಂದ ನಿರಂತರ ಅತ್ಯಾಚಾರ..!
ಜಾರ್ಖಂಡ್ : ಜಾರ್ಖಂಡ್ ನಲ್ಲೊಂದು ಬೆಚ್ಚಿ ಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ. 22 ವರ್ಷದ ಯುವತಿಯನ್ನ ಒತ್ತೆಯಾಳಾಗಿಟ್ಟುಕೊಂಡಿದ್ದ ರಾಕ್ಷಸರು 1 ತಿಂಗಳ ಕಾಲ ನಿರಂತರ ಅತ್ಯಾಚಾರವೆಸಗಿದ್ದಾರೆ. 60 ಕಾಮುಕರು ಈಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಪ್ರತಿ ದಿನ ಡ್ರಗ್ಸ್ ಇಂಜೆಕ್ಟ್ ಮಾಡಿ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಹಿನ್ನೆಲೆ
ಯುವತಿ ಗಂಭೀರವಾಗಿ ಗಾಯಗೊಂಡಿದ್ದ ಸ್ಥಿತಿಯಲ್ಲಿ ಸೆರೈಕೆಲಾ ನಗರದ ಬಳಿ ಪತ್ತೆಯಾಗಿದ್ದಾಳೆ. ಆಕೆಯನ್ನ ಜಾರ್ಖಂಡ್ ಪೊಲೀಸರು ರಕ್ಷಿಸಿದ್ದು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ವೇಳೆ ಆಕೆ ತನ್ನನ್ನ ಕಿಡ್ನಾಪ್ ಮಾಡಿ ಬಂಧನದಲ್ಲಿಟ್ಟು ಸುಮಾರು 60 ಜನರು ನಿರಂತರ 1 ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ಪೊಲೀಸರಿಗೆ ಯುವತಿ ಮಾಹಿತಿ ನೀಡಿದ್ದಾಳೆ. ಯುವತಿಯ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








