ನಕ್ಸಲ್ ಅಟ್ಟಹಾಸ : 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮ
ಛತ್ತೀಸ್ ಗಡ : ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮತಾಗಿದ್ದು, 9 ಮಂದಿ ನಕ್ಸಲರು ಮೃತಪಟ್ಟಿದ್ದಾರೆ.
ನಿನ್ನೆಯಿಂದ ಈ ಗುಂಡಿನ ಚಕಮಕಿ ಆರಂಭವಾಗಿದ್ದು, ಈ ಕಾಳಗದಲ್ಲಿ 31ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹುತಾತ್ಮರಾಗಿರುವ ಸಿಬ್ಬಂದಿಗಳಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‍ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಜವಾನರು ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.