ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೇ 24 ಮಂದಿ ಸಾವು

1 min read
chamarajanagara

ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೇ 24 ಮಂದಿ ಸಾವು

ಚಾಮರಾಜನಗರ : ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರದ ಮಧ್ಯೆ ಚಾಮರಾಜನಗರದಲ್ಲಿ ಘನಘೋರ ದುರಂತವೊಂದು ನಡೆದಿದೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Chamarajanagar

ಭಾನುವಾರ ರಾತ್ರಿಯೇ ಈ ಎಲ್ಲಾ ಸಾವುಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ. ಸದ್ಯ ಘಟನ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆದರೆ ಘಟನೆಯಲ್ಲಿ ಸಾವನ್ನಪ್ಪಿರುವವರು ನಾನಾ ಕಾರಣದಿಂದ ಮೃತಪಟ್ಟಿದ್ದರೆ ಅಂತ ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಇಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂದೆ ನೂರಾರು ಮಂದಿ
ನೆರೆದಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ವಿಡಿಯೋ ಕಾಲ್ ಮಾಡಿದ್ದ ಸೋಂಕಿತರು

ಇತ್ತ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಆಮ್ಲಜನಕ ಸಿಗದೆ ಹಲವರು ಮೃತಪಟ್ಟಿ, ಆಸ್ಪತ್ರೆಯ ಹೊರಗಡೆ ಸೋಂಕಿತರ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.

ಇದು ಒಂದು ಕಡೆಯಾದ್ರೆ ಸಮರ್ಪಕವಾಗಿ ಅಕ್ಸಿಜನ್ ಪೂರೈಕೆಯಾಗದೆ ಐಸಿಯುನಲ್ಲಿರುವ 50ಕ್ಕೂ ಹೆಚ್ಚು ಸೋಂಕಿತರು ನರಳಾಡುತ್ತಿದ್ದಾರೆ. ಕೆಲವರು ವಿಡಿಯೋ ಕಾಲ್ ಮೂಲಕ ಕುಟುಂಬಸ್ಥರ ಬಳಿ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd