ಆಕ್ಸಿಜನ್ ಇಲ್ಲದೆ 24 ಮಂದಿ ಸಾವು : ಜಿಲ್ಲಾಡಳಿತ ವಿರುದ್ಧ ಜನಾಕ್ರೋಶ

1 min read
chamarajanagara

ಆಕ್ಸಿಜನ್ ಇಲ್ಲದೆ 24 ಮಂದಿ ಸಾವು : ಜಿಲ್ಲಾಡಳಿತ ವಿರುದ್ಧ ಜನಾಕ್ರೋಶ chamarajanagara

ಚಾಮರಾಜನಗರ : ಆಕ್ಸಿಜನ್ ಕೊರತೆಯಿಂದ 24 ಕೊರೊನಾ ಸೋಂಕಿತರು ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಆಸ್ಪತ್ರೆಯ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಚಾಮರಾಜನಗರ ಡಿ.ಸಿ. ಎಂ.ಆರ್. ರವಿ, ಆಕ್ಸಿಜನ್ ಸಮಸ್ಯೆಯಿಂದಲೇ ಎಲ್ಲಾ ರೋಗಿಗಳು ಸಾವನ್ನಪ್ಪಿಲ್ಲ.

chamarajanagara

ಬೇರೆ ಸಮಸ್ಯೆಗಳಿಂದಲೂ ರೋಗಿಗಳು ಸಾವನ್ನಪ್ಪಿದ್ದಾರೆ. ನಮಗೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗಬೇಕಿತ್ತು. ಆದರೆ ಆಕ್ಸಿಜನ್ ಬಂದಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ವಿಡಿಯೋ ಕಾಲ್ ಮಾಡಿದ್ದ ಸೋಂಕಿತರು
ಇದು ಮಾತ್ರವಲ್ಲದೇ ಸಮರ್ಪಕವಾಗಿ ಅಕ್ಸಿಜನ್ ಪೂರೈಕೆಯಾಗದೆ ಐಸಿಯುನಲ್ಲಿರುವ 50ಕ್ಕೂ ಹೆಚ್ಚು ಸೋಂಕಿತರು ನರಳಾಡುತ್ತಿದ್ದಾರೆ.

ಕೆಲವರು ವಿಡಿಯೋ ಕಾಲ್ ಮೂಲಕ ಕುಟುಂಬಸ್ಥರ ಬಳಿ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd