ನವದೆಹಲಿ : ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿ ಕೊರೊನಾ ಸೋಂಕು ದಾಖಲೆಯನ್ನು ಸೃಷ್ಟಿಸಿದ್ದು ಆತಂಕ ಹೆಚ್ಚಿಸಿದೆ. ಒಂದೇ ದಿನದಲ್ಲಿ 26,506 ಮಂದಿಗೆ ಮಾರಕ ಸೋಂಕಿರುವುದು ದೃಢಪಟ್ಟಿದ್ದು, ಈ ಕ್ಲಿಲರ್ ಸೋಂಕಿಗೆ 475 ಮಂದಿ ಬಲಿಯಾಗಿದ್ದಾರೆ.
ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 26,506 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ.
7,93,802 ಸೋಂಕಿತರ ಪೈಕಿ 4,95,513 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸದ್ಯ 2,76,685 ಮಂದಿ ಆಸ್ಪತ್ರೆಗಳ್ಲಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಡೆಡ್ಲಿ ಸೋಂಕಿಗೆ ಈವರೆಗೆ ಬಲಿಯಾದವರ ಸಂಖ್ಯೆ 21,604ಕ್ಕೆ ಏರಿಕೆಯಾಗಿದೆ.