ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಹೊಸದಾಗಿ 24 ಕೊರೊನಾ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗುವ ಮೂಲಕ, 600ರ ಸಮೀಪಕ್ಕೆ ಬಂದಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ವಿವಿಧ ಜಿಲ್ಲೆಗಳಲ್ಲಿ 24 ಜನರಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯಲ್ಲಿ ಎಂಟು ಜನರಿಗೆ, ಬೆಳಗಾವಿಯ ರಾಯಭಾಗದ ಮೂವರಿಗೆ, ವಿಜಯಪುರದಲ್ಲಿ ಒಬ್ಬರಿಗೆ, ದಕ್ಷಿಣ ಕನ್ನಡದಲ್ಲಿ ಇಬ್ಬರಿಗೆ, ದಾವಣಗೆರೆಯ ಆರು ಜನರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ಕಲಬುರ್ಗಿಯಲ್ಲಿ ಇಬ್ಬರಿಗೆ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ.
ಇದುವರೆಗೆ ಕೊರೊನಾ ಸೋಂಕಿನಿಂದಾಗಿ ರಾಜ್ಯದಲ್ಲಿ 22 ಜನರು ಸಾವನ್ನಪ್ಪಿದ್ದು, ಕೊರೊನಾ ಪೀಡಿತರಾಗಿದ್ದಂತ 251 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.