ನಕಲಿ ಮದ್ಯ ಸೇವಿಸಿ 24 ಮಂದಿ ಸಾವು

1 min read
alcoholics

ನಕಲಿ ಮದ್ಯ ಸೇವಿಸಿ 24 ಮಂದಿ ಸಾವು

ನಕಲಿ ಮದ್ಯ ಸೇವಿಸಿ 24 ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಪಶ್ಚಮ ಚಂಪಾರಣ್ ಜಿಲ್ಲೆಯ ಗೋಪಾಲ್ ಗಂಜ್ ನಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ಹಲವರು ತೀವ್ರ ಅಸ್ವಸ್ಥರಾಗಿದ್ದು, ಅವರನ್ನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಈ ಸ್ಥಳದಲ್ಲಿ ಕಳೆದ ಎರೆಡು ದಿನಗಳಿಂದ ಮದ್ಯ ಮಾರಾಟವನ್ನ ನಿಷೇಧಿಸಲಾಗಿದೆ.

ಬೆಟ್ಟಿಯಾ ಬಳಿಯ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು. ಮತ್ತೆ ಗೋಪಾಲ್‌ಗಂಜ್‌ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.  24 ಮಂದಿ ಸಾವಿಗೆ ನಿಖರ ಕಾರಣವನ್ನು ಜಿಲ್ಲಾಡಳಿತ ಇನ್ನೂ ಸ್ಪಷ್ಟಪಡಿಸಿಲ್ಲ. ತೆಲ್ಹುವಾದಲ್ಲಿ ಆಗಿರುವ ಕಳ್ಳಭಟ್ಟಿ ಪ್ರಕರಣವು ಉತ್ತರ ಬಿಹಾರ್‌ ನಲ್ಲಿ ಸಂಭವಿಸಿದ ಮೂರನೇ ದುರಂತವಾಗಿದೆ. ಕಳೆದ 10 ದಿನಗಳ ಹಿಂದೆ ಇದೇ ಮಾದರಿಯಲ್ಲಿ ಸಾವು ಸಂಭವಿಸಿತ್ತು.

ಕೊರೊನಾ | ಇನ್ಮುಂದೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ

ಬಿಹಾರ ಸಚಿವ ಜಾನಕ್‌ ರಾಮ್‌ ಅವರು ಗೋಪಾಲ್‌ಗಂಜ್‌ ಗೆ ಭೇಟಿ ನೀಡಿದ್ದಾರೆ. ನಂತರ ಮಾತನಾಡಿ, ಶಂಕಿತ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿದ್ದೇನೆ. ಇದು ಎನ್‌ಡಿಎ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮಾಡಿರುವ ಪಿತೂರಿಯಾಗಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೋಪಾಲ್‌ಗಂಜ್‌ ಹಿರಿಯ ಪೊಲೀಸ್‌ ಅಧಿಕಾರಿ ಆನಂದ್‌ ಕುಮಾರ್‌, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜನರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd