ನವದೆಹಲಿ : ಭಾರತದಲ್ಲಿ ಕೊರೊನಾ ಮರಣ ಕೇಕೆ ಮುಂದುವರಿದಿದೆ. ದೇಶದಲ್ಲಿ ಕೊರೊನಾ ಒಂದೇ ದಿನದಲ್ಲಿ ದಾಖಲೆ ಬರೆದಿದ್ದು, 24 ಗಂಟೆ ಅವಧಿಯಲ್ಲಿ 24,879 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, 487 ಮಂದಿ ಬಲಿಯಾಗಿದ್ದಾರೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ದೇಶದಲ್ಲಿ ಒಂದೇ ದಿನ 24,879 ಮಂದಿಗೆ ಸೋಂಕು ದೃಢಪಟ್ಟಿದ್ದು, 487 ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7,67,296ಕ್ಕೆ ಏರಿಕೆಯಾಗಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 21,129ಕ್ಕೆ ಏರಿಕೆಯಾಗಿದೆ.
7,67,296 ಕೊರೊನಾ ಸೋಂಕಿತರ ಪೈಕಿ 4,76,378 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,69,789 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.