BJP 25 ಸಂಸದರಿಗೆ ಮೋದಿ ಗುಲಾಮಗಿರಿ ಮುಖ್ಯವೋ, ಕನ್ನಡಿಗರ ಹಿತವೋ
ಬೆಂಗಳೂರು : ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯ 25 ಸಂಸದರಿಗೆ ಮೋದಿ ಗುಲಾಮಗಿರಿ ಮುಖ್ಯವೋ, ಕನ್ನಡಿಗರ ಹಿತ ಮುಖ್ಯವೋ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ.
ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಟ್ವಿಟ್ಟರ್ ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಕಾಂಗ್ರೆಸ್ ಟ್ವೀಟ್ ನಲ್ಲಿ..
ಕೇಂದ್ರೀಯ ಭದ್ರತಾ ಪಡೆಗಳ ನೇಮಕಾತಿಗೆ ಕೇವಲ ಹಿಂದಿ ಇಂಗ್ಲಿಷ್ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದ್ದಕ್ಕೆ ಬಿಜೆಪಿ ಸರ್ಕಾರ ಆಕ್ಷೇಪ ಎತ್ತಲಿಲ್ಲವೇಕೆ? ಕನ್ನಡಿಗರ ಹಿತ ಬೇಕಿಲ್ಲವೇ? ಕನ್ನಡಿಗರಿಗೆ ಉದ್ಯೋಗ ಬೇಡವೇ? ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯ 25 ಸಂಸದರಿಗೆ ಮೋದಿ ಗುಲಾಮಗಿರಿ ಮುಖ್ಯವೋ, ಕನ್ನಡಿಗರ ಹಿತ ಮುಖ್ಯವೋ ಎಂದು ಪ್ರಶ್ನಿಸಿದೆ.








