ದೆಹಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ 25 ಮಂದಿ ಸಾವು
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಎರಡನೇ ಅಲೆಗೆ ಜನರು ತತ್ತರಿಸಿ ಹೋಗಿದ್ದಾರೆ.
ಪ್ರತಿದಿನ ದೆಹಲಿಗೆ ಕೊರೊನಾ ಸುನಾಮಿಯೇ ಅಪ್ಪಳಿಸುತ್ತಿದೆ. ಈಗಾಗಲೇ ಅಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಆದ್ರೆ ಈ ಮಧ್ಯೆ ದೆಹಲಿಯ ಶ್ರೀಗಂಗಾ ರಾಮ್ ಆಸ್ಪತ್ರೆಯಲ್ಲಿ 25 ರೋಗಿಗಳು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಕೇವಲ 24 ಗಂಟೆಗಳಲ್ಲಿ 25 ಮಂದಿ ಕೊನೆಯುಸಿರೆಳೆದಿದ್ದಾರೆ.
ಇದಕ್ಕೆ ಆಸ್ಪತ್ರೆಯ ಅಧಿಕಾರಿಗಳು ಆಕ್ಸಿಜನ್ ಕೊರತೆಯೇ ಕಾರಣ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಆಸ್ಪತ್ರೆಯಲ್ಲಿ ಇನ್ನೂ 60 ರೋಗಿಗಳ ಜೀವ ಅಪಾಯದಲ್ಲಿದ್ದು, ತುರ್ತಾಗಿ ಆಕ್ಸಿಜನ್ ಬೇಕಿದೆ ಎಂದು ಆಸ್ಪತ್ರೆ ನಿರ್ದೇಶಕರು ಕಣ್ಣೀರು ಹಾಕಿದ್ದಾರೆ.