ಅಡೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ : 25 ಜನ ಸಾವು
ಸನಾ : ಅಡೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಈ ಘಟನೆ 25 ಜನರು ಮೃತಪಟ್ಟಿದ್ದರೆ 110 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಲ್ಲಿ ನೂತನವಾಗಿ ಸರ್ಕಾರ ರಚನೆಯಾಗಿದ್ದು, ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನವು ಲ್ಯಾಂಡ್ ಆಗುತ್ತಿದ್ದಂತೆಯೇ ಬಾಂಬ್ ಸ್ಫೋಟಗೊಂಡಿದೆ.
ಸದ್ಯ ಸರ್ಕಾರಿ ವಿಮಾನದಲ್ಲಿದ್ದ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದು ಇರಾನ್ ಬೆಂಬಲಿತ ಹೌತಿ ಬಂಡುಕೋರರ ಕೃತ್ಯ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಇನ್ನು ಘಟನೆಯನ್ನು ಖಂಡಿಸಿರುವ ಯೆಮೆನ್ ಪ್ರಧಾನಿ ಮಾಯೀನ್ ಅಬ್ದುಲ್ಮಾಲಿಕ್ ಸಯೀದ್, ಇದೊಂದು ಹೇಡಿತನದ ಭಯೋತ್ಪಾದಕ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










