ಭೋಪಾಲ್: ಚಿಲ್ಡ್ರನ್ ಹೋಮ್ ನಿಂದ (children’s home) 26 ಬಾಲಕಿಯರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಈ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಭೋಪಾಲ್‌ನ ಪರ್ವಾಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದ ಚಿಲ್ಡ್ರನ್ ಹೋಮ್ನಿಂದ 26 ಬಾಲಕಿಯರು ನಾಪತ್ತೆಯಾಗಿದ್ದು, ಗಮನಕ್ಕೆ ಬಂದಿದೆ. ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಪರಿಗಣಿಸಿ, ಸರ್ಕಾರವು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ.
ಸದ್ಯ ಚಿಲ್ಡ್ರನ್ ಹೋಮ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿ ವ್ಯಕ್ತಿಯನ್ನು ಚಿಲ್ಡ್ರನ್ ಹೋಮ್ ವ್ಯವಸ್ಥಾಪಕ ಅನಿಲ್ ಮೆಥ್ಯೂ ಎಂದು ಹೆಸರಿಸಿದ್ದಾರೆ. ಚಿಲ್ಡ್ರನ್ ಹೋಮ್ ನಲ್ಲಿದ್ದ 68 ಬಾಲಕಿಯಲ್ಲಿ 26 ಜನ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.








