ದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, 27 ಮಂದಿ ಸಜೀವ ದಹನ

1 min read

ದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, 27 ಮಂದಿ ಸಜೀವ ದಹನ

ನವದೆಹಲಿಯ ಪಶ್ಚಿಮ ಭಾಗದಲ್ಲಿ ನಾಲ್ಕು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ವಾಣಿಜ್ಯ ಕಟ್ಟಡವು ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ (Metro Station)  ಬಳಿ ಇದೆ. ಕಟ್ಟಡದಿಂದ ಸುಮಾರು 60-70 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, ಸಂಜೆ 4.40 ಕ್ಕೆ ಬೆಂಕಿಯ ಬಗ್ಗೆ ಮಾಹಿತಿ ಲಭಿಸಿತು, ನಂತರ  20 ಅಗ್ನಿಶಾಮಕ ಟೆಂಡರ್‌ಗಳು ಘಟನಾ ಸ್ಥಳಕ್ಕೆ ಧಾವಿಸಿವೆ.  ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಕೂಡ ಸ್ಥಳಕ್ಕೆ ಧಾವಿಸುತ್ತಿದೆ ಎಂದು ತಿಳಿಸಿದ್ದಾರೆ.

ಇದು ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡವಾಗಿದ್ದು, ಕಂಪನಿಗಳಿಗೆ ಕಚೇರಿ ಸ್ಥಳವನ್ನು ಒದಗಿಸಲಾಗಿತ್ತು. ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿ ಮೊದಲನೇ ಮಹಡಿಯಲ್ಲಿದ್ದು, ಆ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಸಂಬಂಧ ಇದೀಗ ಕಂಪನಿಯ ಮಾಲೀಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಡಿಸಿಪಿ ಸಮೀರ್ ಶರ್ಮಾ ಅವರು ಮಾಹಿತಿ ನೀಡಿ, ಇದೂವರೆಗೆ ಒಟ್ಟು 50 ಜನರನ್ನು ರಕ್ಷಿಸಲಾಗಿದೆ. 27-28 ಮಂದಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿವೆ. ಈ ಸಂಬಂಧ ಪರಿಶೀಲನೆಗಳ ನಡೆಸಲಾಗುತ್ತಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಸಂತಾಪ   
“ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ದುಃಖಿತವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಕಚೇರಿ ಟ್ವೀಟ್ ಮಾಡಿದೆ.

ಪ್ರಧಾನಿ ಮೋದಿ ಸಂತಾಪ
“ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಯಿಂದ ಅತೀವ ದುಃಖವಾಗಿದೆ. ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾ ಸೂಚಿಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd