ಬೆಂಗಳೂರು: ಕನ್ನಡ ಫಲಕಗಳನ್ನೇ ಅಳವಡಿಸಬೇಕೆಂಬ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರ ಹೋರಾಟ ಜೋರಾಗಿದ್ದು, ರಾತ್ರೋರಾತ್ರಿ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ಬಂಧಿಸಲಾಗಿದೆ. ಸದ್ಯ ಅವರಿಗೆ ಕೋರ್ಟ್ 14 ದಿನ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕರವೇ (Karve) ಅಧ್ಯಕ್ಷ ನಾರಾಯಣಗೌಡ (Narayan Gowda) ಸೇರಿದಂತೆ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನಾರಾಯಣಗೌಡ ಸೇರಿದಂತೆ 29 ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಜ. 10ರ ವರೆಗೂ ಬಂಧಿತರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.
ಕರವೇ ಅಧ್ಯಕ್ಷ ನಾರಾಯಣಗೌಡ ಬಂಧನದ ಹಿನ್ನೆಲೆಯಲ್ಲಿ ಸಿಎಂ ಮನೆ ಎದುರು ಮುತ್ತಿಗೆ ಹಾಕುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಸಿಎಂ ಮನೆ ಎದುರು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.