ಮುಂದುವರೆದ ಕೊರೊನಾ ರಣಕೇಕೆ corona cases : 24 ಗಂಟೆಗಳಲ್ಲಿ 2,95,041 ಕೇಸ್ ದೃಢ
ನವದೆಹಲಿ : ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ತಗ್ಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2,95,041 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,39,357 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ 2,95,041 ಮಂದಿಗೆ ಸೋಂಕಿರುವುದು ದೃಢಪಟ್ಟಿದೆ.
ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,023 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,67,457 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೂ 1,32,76,039 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 21,57,538 ಸಕ್ರಿಯ ಪ್ರಕರಣಗಳಿವೆ.