ಮತ್ತೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!
2021 ರ ಆಗಸ್ಟ್-ಸೆಪ್ಟೆಂಬರ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು (ಸೆಪ್ಟೆಂಬರ್ 20) ಹೊರಬಂದಿದೆ.
ಬೆಳಿಗ್ಗೆ 10: 30 ಕ್ಕೆ ಫಲಿತಾಂಶ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಪರ್ಯಾಯ ಮೌಲ್ಯಮಾಪನ ವಿಧಾನಗಳ ಮೂಲಕ ಪಡೆದ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು.
ಈ ಪರೀಕ್ಷೆಯಲ್ಲಿ ಶೇ 29ರಷ್ಟು ಮಂದಿ ಪಾಸ್ ಆಗಿದ್ದಾರೆ. ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದಾಗಿದೆ. ಪರೀಕ್ಷೆಗಳು ಆಗಸ್ಟ್ 19 ಮತ್ತು ಸೆಪ್ಟೆಂಬರ್ 3 ರ ನಡುವೆ ನಡೆದ್ದವು.
ಇದೀಗ ಇದರ ಫಲಿತಾಂಶ ಪ್ರಕಟವಾಗಿದೆ. ಒಟ್ಟು 18 ಸಾವಿರದ 414 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ 17,469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್, 593 ಪ್ರೆಶರ್ಸ್ ವಿದ್ಯಾರ್ಥಿಗಳಿದ್ದಾರೆ.
ಆಗಸ್ಟ್- ಸೆಪ್ಟೆಂಬರ್ ನಲ್ಲಿ ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು. ಈ ಹಿಂದೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳನ್ನು ಜುಲೈ 20 ರಂದು ಘೋಷಿಸಲಾಗಿತ್ತು.
ಈ ವರ್ಷ 3,35,138 ಹುಡುಗರು ಮತ್ತು 3,31,359 ಹುಡುಗಿಯರು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಗಾರ್ಡನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ – ಅಪ್ರೆಂಟಿಸ್ ಮತ್ತು ಹೆಚ್ಆರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕಗಳನ್ನು ಪಡೆದಿದ್ದಾರೆ, 1,47,055 ದ್ವಿತೀಯ ಸ್ಥಾನ ಪಡೆದರು ಮತ್ತು 68,729 ಮಂದಿ ಯಾವುದೇ ಶ್ರೇಣಿಯಿಲ್ಲದೆ ಉತ್ತೀರ್ಣರಾಗಿದ್ದರು.
ಒಟ್ಟಾರೆಯಾಗಿ, 4,50,706 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಮೊದಲ ವಿಭಾಗವನ್ನು ಪಡೆದುಕೊಂಡಿದ್ದರು. ಆಗಸ್ಟ್-ಸೆಪ್ಟೆಂಬರ್ ಫಲಿತಾಂಶಗಳು ಇಂದು ಹೊರಬಂದಿದೆ.
ಕರ್ನಾಟಕ 12 ನೇ ಫಲಿತಾಂಶಗಳನ್ನು ಪರೀಕ್ಷಿಸಲು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕದೊಂದಿಗೆ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಬೇಕು.