2 PUC ರಿಸಲ್ಟ್ ಗೆ ಡೇಟ್ ಫಿಕ್ಸ್ – ನಾಳೆಯೇ ಫಲಿತಾಂಶ ಪ್ರಕಟ…
ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ (ಜೂ.18) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಬಿ.ಸಿ.ನಾಗೇಶ್ ಅವರು ಟ್ವೀಟ್ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಕಳೆದ ಏಪ್ರಿಲ್ 22 ರಿಂದ ಮೇ 18 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. 6.80 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಒಟ್ಟು 6,84,255 ಮಕ್ಕಳು ಪರೀಕ್ಷೆಗೆ ನೊಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ 3,46,936 ಬಾಲಕರು, 3,37,319 ಬಾಲಕೀಯರು ಪರೀಕ್ಷೆ ಬರೆದಿದ್ದಾರೆ. ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.