ಕಾರವಾರ: ಕರಾವಳಿ ಭಾಗದಲ್ಲಿ ಮಂಗನ ಕಾಯಿಲೆಯ ಆತಂಕ ಹೆಚ್ಚಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಕಾಯಿಲೆಗೆ ಎರಡನೇ ಬಲಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಅವರು ಕಳೆದ 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದದಾರೆ.
ಅಲ್ಲದೇ, ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ ತುತ್ತಾಗಿರುವವರ ಸಂಖ್ಯೆ 43ಕ್ಕೆ ಏರಿಕೆ ಕಂಡಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಗೆ ಜ್ವರ ತೀವ್ರವಾದ ಹಿನ್ನೆಲೆ ಮೂರು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.