ಜಮ್ಮು ಮತ್ತು ಕಾಶ್ಮೀರದಲ್ಲಿ 3.0 ತೀವ್ರತೆಯ ಭೂಕಂಪನ
ಜಮ್ಮು, ಜುಲೈ 24: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪನವು ಶುಕ್ರವಾರ (ಜುಲೈ 24) ಜಮ್ಮು ಮತ್ತು ಕಾಶ್ಮೀರದ ಕತ್ರಾ ಪ್ರದೇಶದಲ್ಲಿ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಇಂದು ಬೆಳಿಗ್ಗೆ 5: 11 ಕ್ಕೆ ಕತ್ರಾದಲ್ಲಿ ಭೂಕಂಪನ ಸಂಭವಿಸಿದೆ.
ಯಾವುದೇ ಗಾಯ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಭೂಕಂಪನದ ಕೇಂದ್ರ ಬಿಂದು ಕತ್ರಾದ ಪೂರ್ವದಿಂದ 89 ಕಿ.ಮೀ ದೂರದಲ್ಲಿ ಕೇಂದ್ರಬಿಂದುವನ್ನು ಗುರುತಿಸಲಾಗಿದೆ.
ಒಂದು ವಾರದಲ್ಲಿ ಜಮ್ಮು ಮತ್ತು ಕಾಶ್ಮೀರದ ಕತ್ರಾವನ್ನು ಅಪ್ಪಳಿಸಿದ ಎರಡನೇ ಭೂಕಂಪ ಇದಾಗಿದೆ. ಜುಲೈ 17 ರಂದು, ರಿಯಾಸಿ ಜಿಲ್ಲೆಯ ಕತ್ರಾದಿಂದ ಪೂರ್ವಕ್ಕೆ 88 ಕಿ.ಮೀ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ
ಇದಕ್ಕೂ ಮೊದಲು ಜುಲೈ 8 ರಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಬಳಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ








