ಚಿತ್ರದುರ್ಗ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟದಣಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಿರಿಯೂರು ನಗರ ಠಾಣೆ ಪೊಲೀಸರು ದಾಳಿ ನಡೆಸಿ, 5 ಕೆಜಿ 250 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆಯ ವರ್ಧಮಾನ ಜುವೆಲರಿಗೆ ಸೇರಿದ ಚಿನ್ನಾಭರಣ ಎನ್ನಲಾಗಿದೆ. ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಈ ಕುರಿತು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.