ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಉಮಟಾದ ಬುರಾನ್ ಸೇರಿದಂತೆ ಮೂರು ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಿತ್ತು.
ಈಗ ಮತ್ತೆ, ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಮೇಲೈ ಸುಳಿಗಾಳಿಯಿಂದಾಗಿ ಇಂದಿನಿಂದ ಬೆಂಗಳೂರು, ಚಿಕ್ಕಮಗಳೂರು, ಮಂಗಳೂರು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರೀ ಮಳೆಯಾಗಲಿದ್ದು, ಕೇರಳ ಮತ್ತು ಕರ್ನಾಟಕದ ದಕ್ಷಿಣ ಮತ್ತು ಕರಾವಳಿ ಭಾಗದಲ್ಲೂ ಮಳೆ ಬೀಳುವ ಸಾಧ್ಯತೆಯಿದೆ. ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಇಂದಿನಿಂದ ಡಿ. 20ರವರೆಗೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಮಿಳುನಾಡಿನ ಗಡಿಯಲ್ಲಿರುವ ಬೆಂಗಳೂರು, ಚಾಮರಾಜನಗರ, ಮೈಸೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಇಂದು ಹಲವು ಕಡೆ ಹಗುರವಾದ ಮಳೆ, ಇನ್ನೂ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳುವ ಸಾಧ್ಯತೆಯಿದೆ.
ತಮಿಳುನಾಡು, ಪಾಂಡಿಚೇರಿ ಮತ್ತು ಕಾರೈಕಲ್ನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಡಿಸೆಂಬರ್ 22ರವರೆಗೂ ಮಳೆ ಮುಂದುವರಿಯಲಿದೆ. ಜೊತೆಗೆ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರ ಪ್ರದೇಶದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel