ಇಂದಿನಿಂದ 3 ದಿನ ರಾಜ್ಯದಲ್ಲಿ ಮಳೆಯ ಅಬ್ಬರ rain saaksha tv
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಉಂಟಾಗಿದೆ.
ಇದರಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರವರೆಗೆ ಭಾರಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯ ಅಬ್ಬರ ಹೆಚ್ಚಾಗಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಇಂದಿನಿಂದ 2 ದಿನ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ವಿಜಯಪುರದಲ್ಲಿ ಇಂದಿನಿಂದ ಸೆ. 28ರವರೆಗೂ ಮಳೆಯಾಗಲಿದೆ.
ಹೀಗಾಗಿ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.









