ಮಲ್ಪೆ ಬಳಿ ಸಮುದ್ರ ಪಾಲಾದ ಮೂವರು ಕೇರಳ ವಿದ್ಯಾರ್ಥಿಗಳು…
ಉಡುಪಿ: ಮಲ್ಪೆ ಬೀಚ್ ಬಳಿಯ ಸೇಂಟ್ ಮೇರಿಸ್ ದ್ವೀಪದ ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಕೇರಳದ ಕೊಟ್ಟಾಯಂ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗುರುವಾರ ಸಾವನ್ನಪ್ಪಿದ್ದಾರೆ.
ಮೃತರನ್ನು ಅಲೆನ್ ರೆಜಿ(22), ಅಮಲ್ ಸಿ ಅನಿಲ್(22) ಮತ್ತು ಆಂಟೋನಿ (21) ಎಂದು ಗುರುತಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಮತ್ತೊಬ್ಬರಿಗಾಗಿ ಶೋಧ ನಡೆಯುತ್ತಿದೆ. ಆ್ಯಂಟನಿಗಾಗಿ ಹುಡುಕಾಟ ನಡೆಯುತ್ತಿದೆ.
42 ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಮತ್ತು ಅವರ ಅಧ್ಯಾಪಕರು ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆ ಆಗಮಿಸಿದ್ದರಿ. ವಿದ್ಯಾರ್ಥಿಯೊಬ್ಬ ತನ್ನ ಫೋನ್ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಈ ದುರಂತ ಸಂಭವಿಸಿದೆ.
ಪ್ರವಾಸಿಗರ ಪ್ರವೇಶ ನಿಷೇಧಿಸಿ ಎಚ್ಚರಿಕೆ ಬೋರ್ಡ್ ಹಾಕಲಾಗಿದ್ದ ಪ್ರದೇಶದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ವಿದ್ಯಾರ್ಥಿ ನೀರಿಗೆ ಜಾರಿ ಬಿದ್ದಿದ್ದಾನೆ, ಇದನ್ನು ಕಂಡ ಇತರ ಇಬ್ಬರು ವಿದ್ಯಾರ್ಥಿಗಳು ಆತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿದ್ದಾರೆ.
ಮೃತ ವಿದ್ಯಾರ್ಥಿಗಳ ಪೋಷಕರಿಗೆ ದುರಂತದ ಬಗ್ಗೆ ಮಾಹಿತಿ ನೀಡಲಾಗಿದ್ದು, ಅವರು ಉಡುಪಿಗೆ ತೆರಳುತ್ತಿದ್ದಾರೆ ಎಂದು ಮಂಗಳಂ ಕಾಲೇಜ್ ಆಫ್ ಇಂಜಿನಿಯರಿಂಗ್ ಮೂಲಗಳು ತಿಳಿಸಿವೆ.