ಕೊರೊನಾಗೆ ಒಂದೇ ದಿನ ಮೂವರು ಸರ್ಕಾರಿ ಶಾಲೆಯ ಶಿಕ್ಷಕರು ಬಲಿ

1 min read

ಕೊರೊನಾಗೆ ಒಂದೇ ದಿನ ಮೂವರು ಸರ್ಕಾರಿ ಶಾಲೆಯ ಶಿಕ್ಷಕರು ಬಲಿ

ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು , ತುಮಕೂರಿನಲ್ಲಿ ಮಹಾಮಾರಿ ಕೊರೊನಾಗೆ ಒಂದೇ ದಿನ ಮೂವರು ಸರ್ಕಾರಿ ಶಾಲೆಯ ಶಿಕ್ಷಕರು ಕೊನೆಯುಸಿರೆಳೆದಿದ್ದಾರೆ.

ತುಮಕೂರಿನ ಕುಣಿಗಲ್ ತಾಲೂಕಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್, ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ,  ಅತಿ ಹೆಚ್ಚು ಸೋಂಕಿತರು ಇರುವ 18 ಬಡವಾಣೆಗಳನ್ನು ಕೋವಿಡ್ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ.

ಸರ್ಕಾರ ಮೊದಲು ಬಿಪಿಎಲ್ ಕಾರ್ಡ್ ದಾರರಿಗೆ ಹಣ ಕೊಡ್ಲಿ : ಸಿದ್ದರಾಮಯ್ಯ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd