ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟ 30 ಮಂದಿ ಸಾವು
ಶುಕ್ರವಾರದ ಪ್ರಾರ್ಥನೆ ಸಮಯದ ವೇಳೆ ಪ್ರಬಲ ಬಾಂಬ್ ಸ್ಫೋಟಗೊಂಡು 30 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ. ಪಾಕಿಸ್ತಾನದ ಜಿಯೋ ನ್ಯೂಸ್ ಚಾನೆಲ್ ಈ ಸುದ್ದಿ ವರದಿ ನೀಡಿದೆ.
ಮೊದಲು ಇಬ್ಬರು ದುಷ್ಕರ್ಮಿಗಳು ಕಿಸಾ ಖ್ವಾನಿ ಮಾರುಕಟ್ಟೆಯಲ್ಲಿರುವ ಮಸೀದಿಗೆ ಪ್ರವೇಶಿಸುವಾಗ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ದಾಳಿಯ ನಂತರ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೇಶಾವರ ಪೊಲೀಸರು ಹೇಳಿದ್ದಾರೆ.
ರಕ್ಷಣಾ ತಂಡಗಳು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯರು ತಮ್ಮ ಬೈಕ್ ಮತ್ತು ಕಾರುಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಪೊಲೀಸರು ಮತ್ತು ಭದ್ರತಾ ತಂಡಗಳು ಪ್ರದೇಶವನ್ನು ಸುತ್ತುವರೆದು ವಶಕ್ಕೆ ಪಡೆದಿವೆ. ಗಾಯಗೊಂಡಿರುವ 10 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
30 killed, over 50 injured in mosque blast during Friday congregation in Pak