ಕೊರೊನಾ ವೈರಸ್ ಸಾರ್ವಜನಿಕರ ನಿದ್ದೆಗೆಡಿಸಿದೆ. ಈ ಮಹಾಮಾರಿ ಜನಜೀವನವನ್ನೇ ಅಸ್ತವ್ಯಸ್ತ ಮಾಡಿದೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಗಳು ನಡೆದರೇ, ಮತ್ತೊಂದೆಡೆ ಅಗತ್ಯವಾದ ಕ್ರಮಗಳನ್ನು ರಾಜ್ಯದ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ.ಅದರ ಭಾಗವಾಗಿ ಮಾಲ್, ಥಿಯೇಟರ್, ನೈಟ್ ಕ್ಲಬ್ ,ಪಬ್ ಗಳನ್ನು ಒಂದು ವಾರಗಳ ಕಾಲ ಬಂದ್ ಮಾಡಲು ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಐಟಿ,ಬಿಟಿಯವರು ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಕೆ.ಎಸ್.ಆರ್.ಟಿ ಗೆ ನಷ್ಟ ಹೆಚ್ಚಾಗುತ್ತಿದೆ. ದಿನ ದಿನಕ್ಕೆ ನಷ್ಟ ಹೆಚ್ಚಾಗುತ್ತಿರುವ ಕಾರಣಕ್ಕೆ ರಾಜ್ಯಾದ್ಯಂತ 300 ಬಸ್ ಗಳ ಸಂಚಾರ ನಿಲ್ಲಿಸಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಆರ್.ಟಿ.ಸಿ ಸಂಚಾರಿ ವಿಭಾಗದ ನಿರ್ದೇಶಕ ಪ್ರಭಾಕರ್ ರೆಡ್ಡಿ, ಕೊರೊನಾ ಬೀತಿಯಿಂದ ಜನರು ಬಸ್ ಸಂಚಾರವನ್ನ ಕಡಿಮೆ ಮಾಡಿದ್ದಾರೆ. ಹಾಗಾಗಿ ಇಂದು ಬೆಳಿಗ್ಗೆ ಯಿಂದ 300 ಬಸ್ ಗಳ ಸಂಚಾರ ರದ್ದು ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...