ಉಕ್ರೇನ್ ನಲ್ಲಿ ಸಿಲಿಕಿದ್ದ 31 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್
ಉಕ್ರೇನ್ -ರಷ್ಯಾ ನಡವಿನ ಯುದ್ಧದಲ್ಲಿ ಸಿಲುಕಿಕೊಂಡಿರವ ಭಾರತೀಯ ವಿದ್ಯಾರ್ಥಿಗಳನ್ನ ಕರೆತರುವ ಕಾರ್ಯಾಚರಣೆ ಮುಂದುವರೆಯುತ್ತಿದೆ. ಆಪರೇಷನ್ ಗಂಗಾ ಕಾರ್ಯಾಚರಣೆ ಭಾರತಕ್ಕೆ ಬಂದಿಳಿದ್ದ 31 ವೈದ್ಯಕೀಯ ವಿದ್ಯಾರ್ಥಿಗಳು ಕರ್ನಾಟಕವನ್ನ ತಲುಪಿದ್ದಾರೆ.
ಉಕ್ರೇನ್ ನಿಂದ ಆಗಮಿಸಿ ಮಂಗಳವಾರ ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿ ತಂಗಿದ್ದ ಈ ವಿದ್ಯಾರ್ಥಿಗಳು ಬೆಂಗಳೂರಿಗೆ ಬಂದಿಳಿದ್ದಾರೆ. ಈ ಮೂಲಕ ಫೆ. 27 ರಿಂದ ಈವರೆಗೆ 86 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ.
ಇನ್ನು ಉಕ್ರೇನ್‌ನಲ್ಲಿ ಸಿಲುಕಿರುವ ಸುಮಾರು 200 ಭಾರತೀಯರನ್ನು ಹೊತ್ತಾ ಸೇನಾ ಪಡೆಯ ವಿಶೇಷ ವಿಮಾನವು ಇಂದು ರೊಮೇನಿಯಾದಿಂದ ದೆಹಲಿ ತಲುಪಿದೆ. ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ನಾಗರಿಕರನ್ನು ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡಿದ್ದಾರೆ.
ಮತ್ತೊಂದು ವಿಮಾನದಲ್ಲಿ ಬೆಳಗಾವಿ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯ ತಲಾ ಇಬ್ಬರು ವಿದ್ಯಾರ್ಥಿಗಳು ಸೇರಿ 11 ಕನ್ನಡಿಗರು ಸುರಕ್ಷಿತವಾಗಿ ಭಾರತಕ್ಕೆ ಆಗಮಿಸಿದ್ದಾರೆ.ದೆಹಲಿಯ ಕರ್ನಾಟಕ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ








