ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳು ಸೇರಿದಂತೆ ಇಂದು 328 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಕುರಿತು ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 7,205 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 328 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಬೆಂಗಳೂರು ನಗರದಲ್ಲಿ 163 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 409 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 1,159 ಸಕ್ರೀಯ ಪ್ರಕರಣಗಳಿದ್ದು, 1,087 ಜನ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. 72 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 9 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಐಸಿಯು ಜೊತೆ ವೆಂಟಿಲೇಟರ್ ಸಪೋರ್ಟ್‍ನಲ್ಲಿದ್ದಾರೆ. 51 ಜನ ಜನರಲ್ ಬೆಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರು ಹೊರತು ಪಡಿಸಿದರೆ, ಮೈಸೂರಿನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಅವಧಿಯಲ್ಲಿ ಮೈಸೂರು 26, ಬೆಂಗಳೂರು ಗ್ರಾಮೀಣ 18, ತುಮಕೂರು 15, ಹಾಸನ 12 ಹಾಗೂ ಚಿಕ್ಕಬಳ್ಳಾಪುರದಲ್ಲಿ 10 ಸಕ್ರೀಯ ಪ್ರಕರಣಗಳು ದಾಖಲಾಗಿವೆ.








