ದಾವಣಗೆರೆ: ವಿಷಕಾರಿ ಹುಲ್ಲು ತಿಂದ ಪರಿಣಾಮ 34 ಕುರಿಗಳು ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಒಂಟಿಹಾಳ್ ಗ್ರಾಮದಲ್ಲಿ ನಡೆದಿದೆ.
ಅಡಿಕೆ ತೋಟದಲ್ಲಿ ಬೆಳೆದಿದ್ದ ವಿಚಿತ್ರ ರೀತಿಯ ಹುಲ್ಲು ತಿಂದು ಕುರಿಗಳು ಇದ್ದಕ್ಕಿದ್ದಂತೆ ಒಂದಾದರೊಂದಂತೆ ಸಾವನ್ನಪ್ಪಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುರಿದಾಸರಹಳ್ಳಿ ನಿವಾಸಿ ಡಿ. ಮಂಜಪ್ಪ ಕುರಿಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.
ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ ಕುರಿಗಳು ಮೃತಪಟ್ಟಿವೆ. ಇನ್ನೂ ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡಿವೆ. ಸರಿಯಾದ ಸಮಯಕ್ಕೆ ಪಶು ವೈದ್ಯರು ಆಗಮಿಸಿ, ಚಿಕಿತ್ಸೆ ನೀಡಿದ ಪರಿಣಾಮ ಹಲವು ಕುರಿಗಳು ಪ್ರಾಣಾಪಾಯದಿಂದ ಪಾರಾಗಿವೆ.