371(ಜೆ) ಕಲಂ | 8 ವರ್ಷಗಳ ಬಳಿಕ ಪ್ರಥಮ ಬಾರಿಗೆ ಸಚಿವ ಸಂಪುಟದ ಉಪ ಸಮಿತಿ ಸಭೆ Saaksha Tv
ಕಲಬುರಗಿ: 371(ಜೆ) ಕಲಂ ಅನುಷ್ಠಾನವಾಗಿ 8 ವರ್ಷಗಳ ಬಳಿಕ ಪ್ರಥಮ ಬಾರಿಗೆ ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆದಿದೆ.
ಹಿಂದುಳಿದ ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ 2013ರಲ್ಲಿ 371(ಜೆ) ಅಡಿ ವಿಶೇಷ ಸ್ಥಾನಮಾನ ನೀಡಲಾಗಿದೆ.
ಈಗ 8 ವರ್ಷದ ಬಳಿಕ ಪ್ರಥಮ ಬಾರಿಗೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ಕಲಬುರಗಿಯ ಕೆಕೆಆರ್‌ಡಿಬಿ ಸಭಾಂಗಣದಲ್ಲಿ 371(ಜೆ) ಅನುಷ್ಠಾನದ ಆದೇಶಗಳ ಪ್ರಗತಿ ಪರಿಶೀಲನೆ ಸಭೆ ನಡೆದಿದೆ. ಆದರೆ ಇದರಲ್ಲಿ ಕೆಲವು ಶಾಸಕರು ಗೈರಾಗಿದ್ದು ಆ ಭಾಗದ ಜನರಿಗೆ ಬೇಸರ ಮೂಡಿಸಿದೆ.
ಈ ಸಭೆಯಲ್ಲಿ ಉಪ ಸಮಿತಿಯ ಅಧ್ಯಕ್ಷ ಸಚಿವ ಬಿ. ಶ್ರೀರಾಮುಲು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದು, ನೇಮಕಾತಿ, ಪ್ರಮೋಷನ್, ಮೀಸಲಾತಿ, ಶೈಕ್ಷಣಿಕ ಬೆಳವಣಿಗೆ ಸೇರಿದಂತೆ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಸ್ಕಿಲ್ಗೆ ಆದ್ಯತೆ ನೀಡಬೇಕು. ವಿಶ್ವವಿದ್ಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಕುರಿತು, ಕಲ್ಯಾಣ ಕರ್ನಾಟಕ ಹೊರತು ಇತರ ಜಿಲ್ಲೆಗಳಲ್ಲೂ ಮೀಸಲಾತಿ ನೀಡಬೇಕು. ಆದಷ್ಟು ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ. ಒಟ್ಟಾರೆ ಕಲ್ಯಾಣ ಕರ್ನಾಟಕದ ಈ ಭಾಗ ಸಮಗ್ರವಾಗಿ ಅಭಿವೃದ್ಧಿಯಾಗಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆದಿದೆ.