ಕೊಡಗಿನಲ್ಲಿ ಸತತ ಮೂರು ದಿನಗಳಿಂದ ಮಳೆ : ಜನರಲ್ಲಿ ಆತಂಕ kodagu
ಕೊಡಗು : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆಯಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ವರ್ಷಧಾರೆ ಆಗುತ್ತಿದ್ದು, ಕಾವೇರಿ ನೀರಿನ ಮಟ್ಟ ಏರಿಕೆಯಾಗುತ್ತಿದೆ,
ಹಳ್ಳ ಕೊಳ್ಳ ತುಂಬಿ ಹರಿಯುತ್ತಿವೆ, ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ.
ಇದರ ಪರಿಣಾಮವಾಗಿ ಕಾವೇರಿ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಇತ್ತ ಜಿಲ್ಲೆಯಲ್ಲಿ 115.6 ಮಿ.ಮೀ. ಇಂದ 204 ಮಿ.ಮೀ. ವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದು, ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಅಪಾಯದ ಸ್ಥಳದಲ್ಲಿರುವ ಜನರು, ಬೆಟ್ಟ ಗುಡ್ಡಗಳಲ್ಲಿ ವಾಸ ಮಾಡುತ್ತಿರುವವರು, ನದಿ ಅಂಚಿನಲ್ಲಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಆದೇಶ ಮಾಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಎನ್ಡಿಆರ್ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ.