ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅತ್ಯಾಚಾರ ಆರೋಪದ ಮೂರನೇ ಪ್ರಕರಣದಲ್ಲಿ ಇಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಎಸ್ ಐಟಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯೆ ನೀಡಿದ್ದ ದೂರಿನ ಮೇರೆಗೆ ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷ್ಯವನ್ನಾಗಿ ಮಾಡಿಕೊಂಡು 120 ಸಾಕ್ಷಿಗಳು, 1,691 ಪುಟಗಳ ಸುದೀರ್ಘ ದೋಷಾರೋಪ ಪಟ್ಟಿಯನ್ನು ಎಸ್ ಐಟಿ, ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಚಾರ್ಜ್ ಶೀಟ್ ನಿಂದ ಕೂಡ ಪ್ರಜ್ವಲ್ ಗೆ ಸಂಕಷ್ಟ ಒದಗಿ ಬರಬಹುದು ಎನ್ನಲಾಗುತ್ತಿದೆ.
ಗನ್ ಪಾಯಿಂಟ್ ನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ವೀಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ವೆಸಗಿ ದೌರ್ಜನ್ಯ ನಡೆಸಲಾಗಿದೆ. ಸಂಸದ ಅನ್ನೋ ಭಯದಿಂದ ದೂರು ಕೊಡದೆ ಸುಮ್ಮನಿರುವುದಾಗಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಈ ಚಾರ್ಜ್ ಶೀಟ್ ಗಳಲ್ಲಿನ ಉಲ್ಲೇಖ ಗಮನಿಸಿದರೆ, ಪ್ರಜ್ವಲ್ ಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗುತ್ತಿದೆ.