3ನೇ ಟಿ20 ಪಂದ್ಯ : ಭಾರತಕ್ಕೆ ಕ್ಲೀನ್ ಸ್ವೀಪ್ ಗುರಿ
ಕೋಲ್ಕತಾ : ನ್ಯೂಜಿಲೆಂಡ್ ವಿರುದ್ಧ ಅಂತಿಮ ಟಿ20 ಪಂದ್ಯ ಇಂದು ಕೊಲ್ಕತ್ತಾದಲ್ಲಿ ನಡೆಯಲಿದೆ.
ಈಗಾಗಲೇ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಸರಣಿ ಕ್ಲೀಸ್ ಸ್ವೀಪ್ ಮಾಡುವ ತವಕದಲ್ಲಿದೆ.
ಕೋಲ್ಕತಾದ ಈಡನ್ ಗಾರ್ಡನ್ಸ್‍ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಗಳಿವೆ.
ಕಳೆದೆರಡು ಪಂದ್ಯಗಳಲ್ಲಿ ಸ್ಥಾನ ಪಡೆಯದವರಿಗೆ ಇಂದು ಅವಕಾಶ ಸಿಗುವ ನಿರೀಕ್ಷೆ ಇದೆ.
ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಆವೇಶ್ ಖಾನ್, ಯಜುವೇಂದ್ರ ಚಹಲ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ಇತ್ತ ನ್ಯೂಜಿಲೆಂಡ್ ತಂಡ ಇಂದಿನ ಪಂದ್ಯವನ್ನು ಗೆದ್ದು ಕ್ಲಿನ್ ಸ್ಪೀಪ್ ತಪ್ಪಿಸಿಕೊಳ್ಳಲು ಪ್ಲಾನ್ ಮಾಡಿಕೊಂಡಿದೆ.
ಇನ್ನು 2022ರ ಐಸಿಸಿ ಟಿ20 ವಿಶ್ವಕಪ್ ಗೆ ಕೇವಲ 11 ತಿಂಗಳು ಬಾಕಿದೆ.
ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ನಾಯಕನಾಗಿರುವ ರೋಹಿತ್ ಶರ್ಮಾ ಆ ವೇಳೆಗಾಗಲೇ ಬಲಿಷ್ಠ ತಂಡ ಕಟ್ಟಬೇಕಿದೆ.
ಹೀಗಾಗಿ ಯುವ ಬ್ಯಾಟರ್ ಹಾಗೂ ಬೌಲರ್‍ಗಳಿಗೆ ಅವಕಾಶ ಕೊಡಲಿದ್ದಾರೆ.









