ಕುತೂಹಲ ಘಟ್ಟದಲ್ಲಿ ಮೂರನೇ ಟೆಸ್ಟ್ ಪಂದ್ಯ : ಭಾರತಕ್ಕೆ ಗೆಲ್ಲಲು 407 ರನ್ ಗುರಿ
ಸಿಡ್ನಿ : ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಕುತೂಹಲ ಮೂಡಿಸಿದೆ. ಆಸೀಸ್ 312 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ಭಾರತಕ್ಕೆ 407 ರನ್ ಗಳ ಅವಶ್ಯಕತೆ ಇದೆ.
ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತ್ತು. ಇಂದು ಆಸೀಸ್ ಪರ ಬ್ಯಾಟಿಂಗ್ ಆರಂಭಿಸಿದ ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಾಬುಶೇನ್ ಉತ್ತಮವಾಗಿ ಇನ್ನಿಂಗ್ಸ್ ಕಟ್ಟಿದ್ರು. 3ನೇ ವಿಕೆಟ್ ಗೆ ಈ ಇಬ್ಬರು ಶತಕದ ಜೊತೆಯಾಟವಾಡಿ ಟೀಂ ಇಂಡಿಯಾ ಬೌಲರ್ ಗಳಿಗೆ ತಲೆನೋವುಂಟು ಮಾಡಿದರು.
ಫಸ್ಟ್ ಇನ್ನಿಂಗ್ಸ್ ನಂತೆ ಎರಡನೇ ಇನ್ನಿಂಗ್ಸ್ ನಲ್ಲೂ ಬೊಂಬಾಟ್ ಬ್ಯಾಟಿಂಗ್ ಮಾಡಿದ ಲಾಬುಶೇನ್ ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ 73 ರನ್ ಗಳಿಸಿರುವಾಗ ಸೈನಿ ಎಸೆತದಲ್ಲಿ ಸಹಾಗೆ ಕ್ಯಾಚ್ ನೀಡಿ ನಿರ್ಗಮಿಸಿದ್ರು. ನಂತರ ಬಂದ ಮ್ಯಾಥ್ಯೂ ವೇಡ್ 4 ರನ್ ಗಳಿಸಿದ್ದ ವೇಳೆ ನವದೀಪ್ ಸೈನಿಗೆ ವಿಕೆಟ್ ಒಪ್ಪಿಸಿದ್ರು.
ಉತ್ತಮವಾಗಿ ಆಡುತ್ತಿದ್ದ ಸ್ಟೀವ್ ಸ್ಮಿತ್ 81 ರನ್ ಗಳಿಸಿದ್ದ ವೇಳೆ ಅಶ್ವಿನ್ ಬಲೆಗೆ ಬಿದ್ರು. ಬೊಂಬಾಟ್ ಬ್ಯಾಟಿಂಗ್ ಮುಂದುವರಿಸಿದ್ದ ಗ್ರೀನ್ ಗೆ ಬೂಮ್ರಾ ಪೆವಿಲಿಯನ್ ದಾರಿ ತೋರಿಸಿದರು. ಕೊನೆಯದಾಗಿ ಆಸ್ಟ್ರೇಲಿಯಾ ಆರು ವಿಕೆಟ್ ಕಳೆದುಕೊಂಡು 312 ರನ್ ಗಳಿಸಿದ್ದ ವೇಳೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಳ್ತು. ಭಾರತಕ್ಕೆ ಪಂದ್ಯ ಗೆಲ್ಲಲು 407ರನ್ ಗಳ ಬೃಹತ್ ಗುರಿ ನೀಡಿದೆ.
ಸದ್ಯ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ 19ರನ್ ಗಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








