ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೊನಾಸುರನ ಅಟ್ಟಹಾಸ ಮುಂದುವರಿದಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಮಾಡಲು ಸರ್ಕಾರ ಲಾಕ್ ಡೌನ್ ಅಸ್ತ್ರ ಪ್ರಯೋಗಿಸಿದೆ. ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿತ್ತು. ಹಾಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಇಂದು ಮಹತ್ವದ ಸಭೆ ನಡೆದಿತ್ತು.
ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಬೆಂಗಳೂರಿನಲ್ಲಿ ನಾಲ್ಕು ಏರಿಯಾಗಳನ್ನು ಲಾಕ್ ಡೌನ್ ಮಾಡಲಾಗಿದೆ. ಕೊರೊನಾ ಸೋಂಕು ಹೆಚ್ಚಾದ ಕಡೆಗಳಲ್ಲಿ ಲಾಕ್ ಡೌನ್ ಅನಿವಾರ್ಯವಾಗಿದೆ. ಹಾಗಾಗಿ ಲಾಕ್ ಡೌನ್ ಮಾಡಲಾಗುತ್ತಿದೆ. ಮಾರುಕಟ್ಟೆ ಪ್ರದೇಶಗಳಲ್ಲಿ ಕೊರೊನಾ ಹರಡುವಿಕೆ ಹೆಚ್ಚಾಗುತ್ತಿದೆ.
ಕಲಾಸಿಪಾಳ್ಯ, ಚಿಕ್ಕಪೇಟೆ, ಚಾಮರಾಜಪೇಟೆ. ಕೆ.ಆರ್. ಮಾರ್ಕೇಟ್ ಪ್ರದೇಶವನ್ನು ಲಾಕ್ ಡೌನ್ ಮಾಡಲಾಗುತ್ತಿದೆ. 14 ದಿನಗಳ ಕಾಲ ಲಾಕ್ ಡೌನ್ ಸರ್ಕಾರ ಮಾಡಿದ್ದೇವೆ. ಅಲ್ಲಿ ಯಾರು ಸಹ ಓಡಾಡುವುಂತಿಲ್ಲ. ಓಡಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳಾಗುವುದು. ಕೊರೊನಾ ಸೋಂಕು ಹೆಚ್ಚಾದರೆ ಮುಲಾಜಿಲ್ಲದೆ ಲಾಕ್ ಡೌನ್ ಮಾಡಲಾಗುವುದು. ಅಲ್ಲದೆ ಮಾರುಕಟ್ಟೆ ಪ್ರದೇಶಗಳಲ್ಲಿ ಹೆಚ್ಚು ಕೊರೊನಾ ಸೋಂಕು ಕಂಡು ಬರುತ್ತಿದೆ.
ಇನ್ನೂ ಸಿದ್ದಾಪುರ, ವಿದ್ಯಾರಣ್ಯಪುರ, ವಿವಿ ಪುರ, ಆನಂದಪುರ ಸೇರಿದಂತೆ 7 ಪ್ರದೇಶ್ ಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.