ಬೆಂಗಳೂರು: ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು ರಾಜ್ಯದಲ್ಲಿ 4 ಹೊಸ ಪ್ರಕರಣಗಳು ಪತ್ತೆಯಾಗಿದ್ದು,ಸೋಂಕಿತರ ಸಂಖ್ಯೆ 105ಕ್ಕೇರಿಕೆಯಾಗಿದೆ.
ಬೆಂಗಳೂರಿನ 24 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದ್ದು, ಈತನ ಹೆಚ್ಚಿನ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಜೊತೆಗೆ, 52 ನೇ ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ನಂಜನಗೂಡಿನ 37 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಇವರು ನಂಜನಗೂಡಿನ ಔಷಧ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರೆಲ್ಲರನ್ನೂ ಪ್ರತ್ಯೇಕ ಆಸ್ಪತ್ರೆಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.








