ಬಿಜೆಪಿಯ 40 ಶಾಸಕರು ಕಾಂಗ್ರೆಸ್ ಗೆ Congress saaksha tv
ಬೆಳಗಾವಿ : ಅತೀ ಶೀಘ್ರದಲ್ಲೇ ಬಿಜೆಪಿಯ 40 ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜು ಕಾಗೆ, ಬಿಜೆಪಿಯ 40 ಶಾಸಕರು ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ.
ಸದ್ಯ ಬಿಜೆಪಿಯಲ್ಲಿ ಒಳಜಗಳ ಹೆಚ್ಚಾಗಿದ್ದು, ಬೆಳಗಾವಿಯ ಬಿಜೆಪಿ ಶಾಸಕರೇ ಕಾಂಗ್ರೆಸ್ ಗೆ ಬರಲು ಸಿದ್ಧರಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದ ರಾಜು ಕಾಗೆ, ಬೆಂಗಳೂರಿಗೆ ಹೋಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಂದಿದ್ದೇನೆ.
ಅವರು ನನಗೆ ಮತಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ತೊಡಗಲು ಹೇಳಿದ್ದಾರೆ ಎಂದರು.