40% ಕಮಿಷನ್ ಆರೋಪ – ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜಿನಾಮೆ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪ ಕೊನೆಗೂ ತಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸಿದ ಕೆ. ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈಶ್ವರಪ್ಪ ರಾಜೀನಾಮೆ ಸಲ್ಲಿಕೆ ವೇಳೆ ಕುರುಬ ಸಮುದಾಯದ ಸಚಿವರಾದ ಬೈರತಿ ಬಸವರಾಜ ಹಾಗೂ ಎಂಟಿಬಿ ನಾಗರಾಜ್ ಉಪಸ್ಥಿತರಿದ್ದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆ.ಎಸ್ ಈಶ್ವರಪ್ಪ ಅವರ ರಾಜೀನಾಮೆ ಪತ್ರವನ್ನು ಮಾಧ್ಯಮಗಳಿಗೆ ತೋರಿಸಿದರು. ರಾಜಿನಾಮೆಯನ್ನ ಅಂಗೀಕರಿಸಿದ್ದು, ಮುಂದಿನ ಕ್ರಮವಾಗಿ ರಾಜ್ಯಪಾಲರಿಗೆ ಕಳುಹಿಸುವುದಾಗಿ ತಿಳಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ.
ಸ್ವಇಚ್ಚೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ ಎಂದು ಎಸ್ ಈಶ್ವರಪ್ಪ ರಾಜಿನಾಮೆ ಪತ್ರದಲ್ಲಿ ಬರೆದಿದ್ದಾರೆ.