ಹಾಸನ : ರಾಜ್ಯ ಸರ್ಕಾರ ಕೊರೊನಾ ಹೆಸರಲ್ಲಿ ವೆಂಟಿಲೇಟರ್ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆಸಿದೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.
ಅರಕಲಗೂಡು ಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಭಾರೀ ಲೂಟಿ ಮಾಡುತ್ತಿದೆ. ಒಂದು ವೆಂಟಿಲೇಟರ್ ಖರೀದಿಗೆ 8.5 ಲಕ್ಷ ಚಾರ್ಜ್ ಮಾಡಿದೆ ಎಂದು ಆರೋಪಿಸಿದ ಪ್ರಜ್ವಲ್, ನಾನು ಕೇವಲ 2.5 ಲಕ್ಷವನ್ನು ನೀಡಿ ಸಂಸದರ ನಿಧಿಯಿಂದ ಸಕಲೇಶಪುರ ಆಸ್ಪತ್ರೆಗೆ ವೆಂಟಿಲೇಟರ್ ನೀಡಿದ್ದೇನೆ ಎಂದಿದ್ದಾರೆ.
ರಾಜ್ಯ ಸರ್ಕಾರ ವೆಂಟಿಲೇಟರ್ ಹೆಸರಲ್ಲಿ 40 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದೆ. ಸಾರ್ವಜನಿಕರ ಹಣ ದುರುಪಯೋಗ ಆಗುತ್ತಿದ್ದು, ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಪ್ರಜ್ವಲ್ ರೇವಣ್ಣ ಆಗ್ರಹಿಸಿದ್ದಾರೆ.








