ಏಸು ಕ್ರಿಸ್ತನನ್ನು (Jesus) ಭೇಟಿಯಾಗಲು ಉಪವಾಸ ಇರಬೇಕು ಎಂಬ ಧಾರ್ಮಿಕ ಬೋಧಕನ ಮಾತು ಕೇಳಿ ಉಪವಾಸ (Fasting) ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 403ಕ್ಕೂ ಹೆಚ್ಚು ಜನ ಸಾವನ್ನಪ್ಪಿ, 610ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಅಲ್ಲದೇ, 12 ಜನರ ಶವ ಕೀನ್ಯಾದ (Kenya) ಶಕಹೊಲ (Shakahola) ಅರಣ್ಯದಲ್ಲಿ ಪತ್ತೆಯಾಗಿದೆ.
ಸಾವನ್ನಪ್ಪಿದವರು ಹಾಗೂ ನಾಪತ್ತೆಯಾಗಿದ್ದವರು ಗುಡ್ ನ್ಯೂಸ್ ಇಂಟರ್ನ್ಯಾಷನಲ್ ಚರ್ಚ್ನ ಸಂಸ್ಥಾಪಕ, ಬೋಧಕ ಪೌಲ್ ಮೆಕೆಂಜಿ ಅನುಯಾಯಿಯಾಗಿದ್ದವರು. ಉಪವಾಸ ಮಾಡಿದರೆ ಏಸುಕ್ರಿಸ್ತನನ್ನು ಸೇರಬಹುದು ಎಂಬ ಆತನ ಮಾತನ್ನು ನಂಬಿದ ಅನುಯಾಯಿಗಳು ಉಪವಾಸ ಮಾಡಿದ್ದು, 403ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. 610ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಸದ್ಯ ಉಪವಾಸ ಮಾಡಲು ಸಲಹೆ ನೀಡಿದ ಆರೋಪಿ ಪೌಲ್ ಮೆಕೆಂಜಿ ಮತ್ತು ಇನ್ನಿತರ 36 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಪಾದ್ರಿ, ಮಕ್ಕಳಿಗೆ ಶಾಲೆಗೆ ಹೋಗಬೇಡಿ, ಬೈಬಲ್ ಶಿಕ್ಷಣವನ್ನು ಮಾನ್ಯ ಮಾಡುವುದಿಲ್ಲ ಎಂದು ಪ್ರಚಾರ ಮಾಡಿದ್ದ. ಅಲ್ಲದೇ ಜನರಿಗೆ ಏಸುಕ್ರಿಸ್ತನ ಭೇಟಿ ಮಾಡಲು ಅವಕಾಶ ಕಲ್ಪಿಸುವುದಾಗಿ ಹೇಳಿ ಜನರನ್ನು ಅರಣ್ಯಕ್ಕೆ ಕರೆಸಿ ಅಲ್ಲಿ ಉಪವಾಸ ಮಾಡಿಸುತ್ತಿದ್ದ ಎನ್ನಲಾಗಿದೆ.