ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡಿಸುತ್ತಿದ್ದು, ನಮ್ಮ ಮೆಟ್ರೋಗೆ ಹೊಸದಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ಹೇಳಿದ್ದಾರೆ.
2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ ಅವರು, ಮೆಟ್ರೋ ಯೋಜನೆ ಹಂತ 2 ಹಾಗೂ 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣವಾಗಲಿದೆ. ನಮ್ಮ ಮೆಟ್ರೋ ಹಂತ-3ರಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆಗೆ ಅರ್ಜಿ ಸಲ್ಲಿಸಲಾಗಿದೆ. ಮೆಟ್ರೋ ಹಂತ-3ಎ ಅಡಿಯಲ್ಲಿ ಡಿಪಿಆರ್ ಕರಡು ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಬಿಐಇಸಿನಿಂದ ತುಮಕೂರು ಮತ್ತು ಕೆಐಎಎಲ್ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 1,334 ಹೊಸ ಎಲೆಕ್ಟ್ರಿಕ್ ಬಸ್ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳ ಸೇರ್ಪಡೆಯಾಗಲಿದೆ ಎಂದು ಹೇಳಿದ್ದಾರೆ.