ಕಾಫಿನಾಡಲ್ಲಿ 48 ಮಂದಿ ಪೊಲೀಸರಿಗೆ ವಕ್ಕರಿಸಿದ ಮಹಾಮಾರಿ
ಚಿಕ್ಕಮಗಳೂರು : ದೇಶದಲ್ಲಿ ಕೊರೊನಾ ಆರ್ಭಟ ದಿನದಿಂದ ಹೆಚ್ಚಾಗ್ತಿದೆ. ಈ ನಡುವೆ ಹಗಲಿರುಳು ಕಷ್ಟ ಪಟ್ಟು ಜನರ ಸೇವೆಯಲ್ಲಿ ತೊಡಗಿರುವ ಕೋವಿಡ್ ವಾರಿಯರ್ಸ್ ಗೂ ಸಂಕಷ್ಟ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ 48 ಮಂದಿ ಪೊಲೀಸರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ.
ಈ ಕುರಿತು ಎಸ್ ಪಿ ಅಕ್ಷಯ್ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಲ್ಲಿ, ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 48 ಮಂದಿ ಪೊಲೀಸರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂದು ಅಕ್ಷಯ್ ಅವರು ಮಾಹಿತಿ ನೀಡಿದ್ಧಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.