ರಾಜ್ಯದಲ್ಲಿಂದು 4,867 ಕೊರೊನಾ Corona ಕೇಸ್ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು, ಇಂದು ರಾಜ್ಯದಲ್ಲಿ 4,867 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಇಂದು 142 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 8,404 ಮಂದಿ ಸೋಂಕಿನಿಂದ ಗುಣಮುಖಿತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 1034 ಹೊಸ ಪ್ರಕರಣಗಳು ಪತ್ತೆಯಾಗಿವೆ.
28 ಮಂದಿ ಮೃತಪಟ್ಟಿದ್ದಾರೆ. 1976 ಮಂದಿ ಬೆಂಗಳೂರಿನಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.3.25ಕ್ಕೆ ಕುಸಿದಿದೆ.









