ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಅಟ್ಟಹಾಸ ಮುಂದುವರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆಯ 49,931 ಮಂದಿಯಲ್ಲಿ ಹೆಮ್ಮಾರಿ ಸೋಂಕು ಇರುವುದು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೇಲಿಯಲ್ಲಿ 49,931 ಮಂದಿಗೆ ಸೋಂಕು ದೃಢಪಟ್ಟಿದ್ದು, 708 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 14,35,453 ಕ್ಕೆ ಹಾಗೂ ಮೃತರ ಸಂಖ್ಯೆ 32,771 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಒಟ್ಟು 14,35,453 ಮಂದಿ ಸೋಂಕಿತರ ಪೈಕಿ 9,17,568 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಉಳಿದಂತೆ ಇನ್ನೂ 4,85,114 ಮಂದಿ ಸೋಂಕಿನಿಂದ ಬಳಲುತ್ತಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








