ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸೇರಿದಂತೆ 5 ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಈ ಘಟನೆ ಲಗ್ಗೆರೆಯಲ್ಲಿ ನಡೆದಿದೆ. ವಿದ್ಯುತ್ ಟ್ರಾನ್ಸ್ಫಾರ್ಮರ್ ಸಿಡಿದ ಪರಿಣಾಮ ಗುಜರಿ ಅಂಗಡಿಗೆ ಬೆಂಕಿ ತಗುಲಿ, ನಂತರ ಅಕ್ಕಪಕ್ಕದ ಮನೆಗಳಿಗೆ ಹಬ್ಬಿದೆ. ಪರಿಣಾಮ 5 ಬೈಕ್ ಗಳು ಸುಟ್ಟು ಕರಕಲಾಗಿವೆ. ಹೀಗಾಗಿ ಭಾರೀ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಟ್ರಾನ್ಸ್ಫಾರ್ಮರ್ ಸಿಡಿದಿರುವ ಶಂಕೆ ವ್ಯಕ್ತವಾಗಿದೆ.