ವಾರದ ಐದು ದಿನ ಕೊಡಗು ಸಂಪೂರ್ಣ ಲಾಕ್ ಡೌನ್
ಕೊಡಗು : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ವಾರದಲ್ಲಿ ಎರಡು ದಿನ ಮಾತ್ರ ಅವಕಾಶ ನೀಡಿ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ.
ಈ ಹಿನ್ನೆಲೆ ಕೊರೊನಾ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ಸೋಮವಾರ ಮತ್ತು ಶುಕ್ರವಾರ ಮಾತ್ರ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಹೊರಗೆ ಬರಬೇಕು 5 ದಿನ ಹೊರಗಡೆ ಬರುವಂತಿಲ್ಲ.
ಬಗ್ಗೆ ಸೋಮವಾರಪೇಟೆ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಮಾತನಾಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇನ್ನು ಲಾಕ್ ಡೌನ್ ಸಮಯದಲ್ಲಿ ಹೋಟೆಲ್, ಹೋಂ ಸ್ಟೇ ಹಾಗೂ ಎಲ್ಲ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಒಂದು ವೇಳೆ ವಾಹನ ಸವಾರರು ಅನಗತ್ಯವಾಗಿ ರಸ್ತೆಗೆ ಬಂದ್ರೆ ವಾಹನಗಳನ್ನು ಸೀಸ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.










