Mandya | ಕೆ.ಆರ್.ಎಸ್ ಡ್ಯಾಂ ಭರ್ತಿಗೆ 5 ಅಡಿ ಬಾಕಿ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿದೆ.
ಹೀಗಾಗಿ ಕೆ.ಆರ್.ಎಸ್ ಡ್ಯಾಂನಒಳ ಹರಿವು ಪ್ರಮಾಣ ಹೆಚ್ಚಳವಾಗಿದ್ದು, ಕೆ.ಆರ್.ಎಸ್ ಡ್ಯಾಂ ಭರ್ತಿಗೆ 5 ಅಡಿ ಮಾತ್ರ ಬಾಕಿ ಉಳಿದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಂನ ಗರಿಷ್ಠ ಮಟ್ಟ 124.80 ಅಡಿ ಇದೆ.
ಸದ್ಯ 119.44 ಅಡಿ ನೀರು ಸಂಗ್ರಹವಾಗಿದೆ.

ಒಳಹರಿವಿನ ಪ್ರಮಾಣ 38,858 ಕ್ಯೂಸೆಕ್ ಗೆ ಏರಿಕೆಯಾಗಿದ್ದು, ಹೊರಹರಿವಿನ ಪ್ರಮಾಣ 3,453 ಕ್ಯೂಸೆಕ್ ರಷ್ಟಿದೆ.
ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ್ರೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಲಿದೆ.
ಹೀಗಾಗಿ ಯಾವುದೇ ಕ್ಷಣದಲ್ಲಾದರು KRS ಡ್ಯಾಂ ನಿಂದ ನೀರು ಹೊರಬಿಡುವ ಸಾಧ್ಯತೆಗಳಿವೆ.
ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ, ಈಗಾಗಲೇ ನದಿ ಪಾತ್ರದ ಜನರಿಗೆ ಎಚ್ಚರಿಕೆ ಕೊಟ್ಟಿದೆ.
ನದಿ ಪಾತ್ರದ ಜನರಿಗೆ ತಮ್ಮ ಆಸ್ತಿ ಪಾಸ್ತಿ ರಕ್ಷಣೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.